ಆನೆಗುಂದಿ ಶ್ರೀಗಳ ಜನ್ಮ ವರ್ಧಂತಿಯ ಅಂಗವಾಗಿ ವಿದ್ಯಾರ್ಥಿ ಭವನ ಉದ್ಘಾಟನೆ ಮತ್ತು ವೇದ ಬ್ರಹ್ಮ ಶ್ರೀ ಶಂಕರಾಚಾರ್ಯ ಕಡ್ಲಸ್ಕರ್ ಪಂಡಿತ್ ಹುಬ್ಬಳ್ಳಿ ಇವರಿಗೆ ಆಸ್ಥಾನ ವಿದ್ವಾನ್ ಪದವಿ ಪುರಸ್ಕಾರ ಜುಲೈ 15 ಕ್ಕೆ.
ಉಡುಪಿ/ಪಡುಕುತ್ಯಾರು: ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಜನ್ಮವರ್ಧಂತಿಯು ಜುಲೈ ತಿಂಗಳ 15 ರಂದು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪಡುಕುತ್ಯಾರಿನಲ್ಲಿ ನಡೆಯಲಿದೆ.
ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ನಾಗಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ದಿವ್ಯ ಸಾನಿಧ್ಯ ವಹಿಸಲಿರುವ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ದೀಪ ಪ್ರಜ್ವಲನಗೊಳಿಸುವರು. ಆನೆಗುಂದಿ ಪ್ರತಿಷ್ಠಾನ ಹಾಗೂ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ಶ್ರೀ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಸುನಿಲ್ ಕುಮಾರ್ ಕಾರ್ಕಳ, ವಿನಯ್ ಕುಮಾರ್ ಸೊರಕೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಶ್ರೀಸುರೇಶ್ ಶೆಟ್ಟಿ ಗುರ್ಮೆ, ಕೋಟ ಶ್ರೀ ಅಮೃತೇಶ್ವರೀ ದೇವಸ್ಥಾನ ಧರ್ಮದರ್ಶಿ ಗೀತಾನಂದ ಫೌಂಡೇಶನ್ ಮಣೂರು ಪ್ರವರ್ತಕರಾದ ಶ್ರೀ ಆನಂದ ಸಿ.ಕುಂದರ್, ಸಮಾಜ ಸೇವಕರಾದ ಶ್ರೀ ಮಿಥುನ್ ಎಂ.ರೈ ಭಾಗವಹಿಸುವರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ ಗಂಗಾಧರ ಆಚಾರ್ಯ ಉಡುಪಿ, ಶ್ರೀ ನಾಗ ಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆಯ ಪ್ರಧಾನ ಸಂಚಾಲಕ ಶ್ರೀ ಸೂರ್ಯ ಕುಮಾರ್ ಆಚಾರ್ಯ ಹಳೆಯಂಗಡಿ, ಆನೆಗುಂದಿ ಶ್ರೀ ಸರಸ್ವತೀ ಎಜುಕೇಶನ್ ಟ್ರಸ್ಟ್ (ರಿ) (ಅಸೆಟ್ )ಅಧ್ಯಕ್ಷ ಶ್ರೀ ಮೋಹನ್ ಕುಮಾರ್ ಬೆಳ್ಳೂರು, ಶ್ರೀ ಸರಸ್ವತೀ ಗೋವು - ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ (ರಿ),ಅಧ್ಯಕ್ಷ ಸುಂದರ ಆಚಾರ್ಯ ಬೆಳುವಾಯಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ, ಅಧ್ಯಕ್ಷ ಶ್ರೀ ಗಣೇಶ್ ಆಚಾರ್ಯ ಕೆಮ್ಮಣ್ಣು, ಶ್ರೀ ಸರಸ್ವತೀ ಮಾತೃ ಮಂಡಳಿ ಅಧ್ಯಕ್ಷೆ ಶೀಮತಿ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲತಾ ಎಸ್ ಕುತ್ಯಾರು ಹಾಗೂ ಪ್ರತಿಷ್ಠಾನದ ಪ್ರಥಮ ವಿಶ್ವಸ್ಥರಾದ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಉಪಾಧ್ಯಕ್ಷರು ಪಾಲ್ಗೊಳ್ಳುವರು.
ಆನೆಗುಂದಿ ಮಹಾ ಸಂಸ್ಥಾನದ ಶ್ರೀ ನಾಗ ಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆಯ ವಿದ್ಯಾರ್ಥಿ ಹಾಗೂ ಮಹಾ ಸಂಸ್ಥಾನದಲ್ಲಿ ವಸತಿ ವ್ಯವಸ್ಥೆ ಇರುವ ವಿದ್ಯಾರ್ಥಿಗಳಿಗಾಗಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಅಂತಸ್ತಿನ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಒಂದು ಕೋಟಿ ರೂಪಾಯಿ ಅನುದಾನ ಪ್ರಸ್ತುತ ಕಟ್ಟಡಕ್ಕೆ ದೊರೆತಿದೆ. ಇದೆ ವೇಳೆ ಆನೆಗುಂದಿ ಶ್ರೀಗಳ ಜನ್ಮವರ್ಧಂತಿ ಉತ್ಸವದ ಧರ್ಮ ಸಂಸತ್ತಿನಲ್ಲಿ ಮಹಾಸಂಸ್ಥಾನದ ವಿದ್ವಾನ್ ಮಂಡಳಿಗೆ ವೈದಿಕ, ಗುರು ಪರಂಪರೆಗೆ ಅನುಪಮ ಸೇವೆ ಸಲ್ಲಿಸುತ್ತಿರುವ
ವೇ.ಬ್ರ.ಶ್ರೀ ಶಂಕರಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಇವರಿಗೆ "ಆಸ್ಥಾನ ವಿದ್ವಾನ್" ಪದವಿಯನ್ನು ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪ್ರಧಾನ ಮಾಡಿ ಆಶೀರ್ವಚನ ನೀಡಲಿರುವರು. ಆನೆಗುಂದಿ ಪ್ರತಿಷ್ಠಾನ ಹಾಗೂ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ, ಶ್ರೀ ಕಾಳಿಕಾಂಬಾ ದೇವಸ್ಥಾನ ಬಾರ್ಕೂರು ಆಡಳಿತ ಮೊಕ್ತೇಸರ ಶ್ರೀ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸುವರು. ಪ್ರತಿ ವರ್ಷ ವಾಡಿಕೆಯಂತೆ ನಡೆಯುವ ಧರ್ಮ ಸಂಸತ್ತು ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸರುಗಳಾದ ಮಹಮಹೋಪಾಧ್ಯಾಯ ವಿದ್ವಾನ್ ಪಂಜ ಭಾಸ್ಕರ ಭಟ್, ಘನಪಾಠಿ ವಿದ್ವಾನ್ ಬಾಲಚಂದ್ರ ಭಟ್ ಚಂದು ಕೂಡ್ಲು, ಅಂತರಾಷ್ಟ್ರೀಯ ಜ್ಯೋತಿಷ್ಯ ವಿದ್ವಾನ್ ಶ್ರೀ ಉಮೇಶ್ ಆಚಾರ್ಯ ಪಡೀಲು, (ಧರ್ಮಾಧಿಕಾರಿಗಳು ಶ್ರೀ ಕಾಳಿಕಾಂಬಾ ಕಮಠೇಶ್ವರ ದೇವಸ್ಥಾನ ನಾಯಂಡರಹಳ್ಳಿ ಬೆಂಗಳೂರು),ಶ್ರೀ ಹರಿಶ್ಚಂದ್ರ ಎನ್. ಆಚಾರ್ಯ (ಅಧ್ಯಕ್ಷರು, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಂಚಸಿಂಹಾಸನ ವಿಕಾಸ ಸಮಿತಿ ಆನೆಗುಂದಿ ಇವರ ಘನ ಉಪಸ್ಥಿತಿಯಲ್ಲಿ ನಡೆಯಲಿದೆ. ಮಹಾಸಂಸ್ಥಾನದ ಕಾಳಿಕಾಂಬಾ ವಿಶ್ವಕರ್ಮ ದೇವಾಲಯಗಳ ಧರ್ಮದರ್ಶಿಗಳಾದ ಶ್ರೀ ಕೆ. ಕೇಶವ ಆಚಾರ್ಯ, ಮಂಗಳೂರು (ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು), ಶ್ರೀ ಕಳಿ ಚಂದ್ರಯ್ಯ ಆಚಾರ್ಯ (ಶ್ರೀಕರಸ್ಥಳ ನಾಗಲಿಂಗಸ್ವಾಮೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ), ಶ್ರೀ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು ಕಾರ್ಕಳ (ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ ಕಾರ್ಕಳ), ಶ್ರೀ ಗಜಾನನ ಆರ್. ಆಚಾರ್ಯ, ಭಟ್ಕಳ (ಶ್ರೀ ಕಾಳಿಕಾಂಬಾ ದೇವಸ್ಥಾನ ಚೌಥನಿ ಭಟ್ಕಳ), ಶ್ರೀ ಬಿ.ಎಂ.ಯದುನಂದನ ಆಚಾರ್ಯ ಬಂಗ್ರ ಮಂಜೇಶ್ವರ (ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನ ಬಂಗ್ರಮಂಜೇಶ್ವರ), ಶ್ರೀ ಮಧುಕರ ಚಂದ್ರಶೇಖರ ಆಚಾರ್ಯ, ಹೊನ್ನಾವರ (ಶ್ರೀ ಕಾಳಿಕಾಂಬಾ ಕಮಠೇಶ್ವರ ದೇವಸ್ಥಾನ ಗೋಕರ್ಣ), ಶ್ರೀ ನವೀನ್ ಆಚಾರ್ಯ ಪಡುಬಿದ್ರೆ (ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟಪಾಡಿ), ಶ್ರೀ ಎ. ಶೇಖರ ಆಚಾರ್ಯ ಕಾಪು (ಶ್ರೀ ಕಾಳಿಕಾಂಬಾ ದೇವಸ್ಥಾನ ಕಾಪು), ಶ್ರೀ ಕೆ. ಸುಧಾಕರ ಆಚಾರ್ಯ ಕೊಲಕಾಡಿ (ಶ್ರೀ ಕಾಳಿಕಾಂಬಾ ದೇವಸ್ಥಾನ ಕೊಲಕಾಡಿ ಮೂಲ್ಕಿ), ಶ್ರೀ ಪುರೋಹಿತ್ ಜಯಕರ ಆಚಾರ್ಯ ಮೂಡಬಿದ್ರೆ (ಶ್ರೀಗುರುಮಠ ಕಾಳಿಕಾಂಬಾ ದೇವಸ್ಥಾನ ಮೂಡಬಿದ್ರೆ), ಶ್ರೀ ಕೆ. ಸುಂದರ ಆಚಾರ್ಯ ಕೋಟೆಕಾರು (ನೆಲ್ಲಿಸ್ಥಳ ಶ್ರೀ ಕಾಳಿಕಾಂಬಾ ದೇವಸ್ಥಾನ ಕೋಟೆಕಾರು), ಶ್ರೀ ಜನಾರ್ದನ ಆಚಾರ್ಯ ಆರಿಕ್ಕಾಡಿ (ಕಾರ್ಳೆ ಶ್ರೀ ಕಾಳಿಕಾಂಬಾ ದೇವಸ್ಥಾನ ಆರಿಕ್ಕಾಡಿ ಕುಂಬಳೆ), ಶ್ರೀ ಕೆ.ಪ್ರಭಾಕರ ಆಚಾರ್ಯ ಕೋಟೆಕಾರು (ಶ್ರೀ ಕಾಳಿಕಾಂಬಾ ಮಠ ಮಧೂರು), ಶ್ರೀ ಪುರುಷೋತ್ತಮ ಆಚಾರ್ಯ ಕಾಞಂಗಾಡು (ಶ್ರೀಮತ್ ಪರಶಿವ ವಿಶ್ವಕರ್ಮೇಶ್ವರ ದೇವಸ್ಥಾನ ಪುದಿಯಕಂಡ, ಮಾವುಂಗಾಲ್, ಕಾಞ್ಞಂಗಾಡು), ಶ್ರೀ ಸಿ.ಎ ಶ್ರೀಧರ ಆಚಾರ್ಯ ಪನ್ವೇಲ್ (ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ನವಿಮುಂಬಯಿ), ಶ್ರೀ ಮನೋಹರ ಲಕ್ಕುಂಡಿ ಹುಬ್ಬಳ್ಳಿ, (ಶ್ರೀ ಕಾಳಿಕಾಂಬಾ ದೇವಸ್ಥಾನ ಹುಬ್ಬಳ್ಳಿ), ಶ್ರೀ ದತ್ತ ಎಂ ಆಚಾರ್ಯ ಅಂಕೋಲ (ಶ್ರೀ ಮಹಾಕಾಳಿ (ಕಾಳಮ್ಮ) ದೇವಸ್ಥಾನ ಶೆಡಗೇರಿ, ಅಂಕೋಲ) ಶ್ರೀ ಬಿ. ಜಗದೀಶ್ ಆಚಾರ್ಯ (ನಾಲ್ಕೂರು ಪಂಜುರ್ಲಿ ದೈವಸ್ಥಾನ ಪಡುಪಣಂಬೂರು) ಇವರ ಉಪಸ್ಥಿತಿಯಲ್ಲಿ ನಡೆಯಲಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪೂರ್ವಾಹ್ನ ಗಂಟೆ 6.ರಿಂದ ವಿಶೇಷ ಹೋಮ ಹವನ ವೈದಿಕ ಕಾರ್ಯಕ್ರಮಗಳು - ಗಣಪತಿ ಅಥರ್ವಶೀರ್ಷ ಹೋಮ, ನವಗ್ರಹ ಹೋಮ, ಧನ್ವಂತರಿ ಹೋಮ, ರುದ್ರ ಹೋಮ, ಮಹಾ ಮೃತ್ಯುಂಜಯ ಹೋಮ ನಡೆಯಲಿದ್ದು ಬಳಿಕ ಜಗದ್ಗುರುಗಳವರ ತುಲಾಭಾರ ಸೇವೆ, ಗುರುಪಾದುಕ ಪೂಜೆ ಸಂಪನ್ನಗೊಳ್ಳಲಿದೆ ಎಂದು ಚಾತುರ್ಮಾಸ್ಯ ವೃತಾಚರಣೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್ ಕಂಬಾರ್ "ನಮ್ಮ ಮಂಜೇಶ್ವರ ನ್ಯೂಸ್" ಗೆ ತಿಳಿಸಿದ್ದಾರೆ.


