43 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾ ಸಭೆ. ನೂತನ ಪದಾಧಿಕಾರಿಗಳ ಪದಗ್ರಹಣ.
ಜುಲೈ 30, 2023
0
43 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾ ಸಭೆ. ನೂತನ ಪದಾಧಿಕಾರಿಗಳ ಪದಗ್ರಹಣ.
ಮಂಜೇಶ್ವರ: 43 ನೇ ವರ್ಷದ ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯ ಇಂದು ಸಂಜೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಜರಗಿತು. ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಡಪ್ಪರ ಅಧ್ಯಕ್ಷತೆ ವಹಿಸಿದರು. ನಂತರ ಗತ ವರ್ಷದ ವರದಿ ವಾಚನ ಹಾಗೂ ಲೆಕ್ಕ ಪತ್ರ ಮಂಡಿಸಲಾಯಿತು. ಬಳಿಕ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು.ಅಧ್ಯಕ್ಷರಾಗಿ ನ್ಯಾ. ನವೀನ್ ರಾಜ್ ಕೆ.ಜೆ, ಪ್ರಧಾನ ಕಾರ್ಯದರ್ಶಿ ಯಾಗಿ ಅವಿನಾಶ್
ಹೆಗ್ಡೆ, ಕೋಶಾಧಿಕಾರಿಯಾಗಿ ಚಿನ್ಮಯಾನಂದ ಆಚಾರ್ಯ ಕಾಳಿಕಾಂಬ, ಪ್ರಧಾನ ಸಂಚಾಲಕರಾಗಿ ಪದ್ಮನಾಭ ಕಡಪ್ಪರ, ಸಂಘಟನಾ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ ಮಾಡ ಆಯ್ಕೆಯಾದರು. ನಂತರ ನೂತನ ಸಮಿತಿಯ ಅಧಿಕಾರ ಹಸ್ತಾಂತರ ನಡೆಯಿತು. ಈ ಸಲದ 43 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ ತಿಂಗಳ 19 ರಿಂದ ಮೊದಲ್ಗೊಂಡು 22 ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ತಿರುಮಲೇಶ ಆಚಾರ್ಯ ಕ್ಷೇತ್ರದಲ್ಲಿ ಆರಾಧಿಸುವ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು, ಸಮಿತಿಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಸ್ವಾಗತಿಸಿ, ಕೋಶಾಧಿಕಾರಿ ಚಿನ್ನಯಾನಂದ ಆಚಾರ್ಯ ವಂದಿಸಿದರು.




