Breaking Posts

6/trending/recent
Type Here to Get Search Results !

8:10:45

ಮೀಯಪದವು ವಿದ್ಯಾವರ್ಧಕ ಶಾಲೆಯಲ್ಲಿ "ಹಲಸು ಮೇಳ."

ಮಿಯಪದವು ವಿದ್ಯಾವರ್ಧಕ ಶಾಲೆಯಲ್ಲಿ "ಹಲಸು ಮೇಳ."

ಮೀಯಪದವು: “ಹಲಸು ಆರೋಗ್ಯಪೂರ್ಣ ನೈಸರ್ಗಿಕ ಫಲ. ಹಲಸಿನ ಅನೇಕ ಮೌಲ್ಯವರ್ಧಿತ ಉತ್ಪನ್ನಗಳು ಇಂದು ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಗ್ರಾಹಕರು ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ವಿದ್ಯಾರ್ಥಿಗಳು ಕೂಡಾ ಇದರ ಮಹತ್ವವನ್ನು ಅರಿಯಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮ ಅರ್ಥಪೂರ್ಣವಾದದ್ದು” ಎಂದು ಶ್ರೀ ವೆಂಕಟಕೃಷ್ಣ ಶರ್ಮ ಮುಳಿಯ ಅಭಿಪ್ರಾಯಪಟ್ಟರು. ಅವರು

                            Advt

ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಂಡ "ಹಲಸು ಮೇಳ"ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತಾನಾಡಿದರು.

ಶಾಲಾ ಸಂಚಾಲಕರಾದ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಕಾರ್ಯಕರ್ಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪಂಚಾಯತು ಸದಸ್ಯರಾದ ಶ್ರೀಮತಿ. ರುಕಿಯಾ ಸಿದ್ದಿಕ್, ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ. ಶ್ರೀಧರ ರಾವ್, ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ. ಶಿವಶಂಕರ. ಬಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ. ಜಿ.ಜಿ ಮೋಳ್, ಮಾತೃ ಸಂಘದ ಅಧ್ಯಕ್ಷರಾದ ಶ್ರೀಮತಿ ಲಲಿತ ಶುಭಾಶಂಸನೆಗೈದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಹಲಸಿನ ವಿವಿಧ
ಖಾದ್ಯ ಪದಾರ್ಥಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಾಲಾ ಪ್ರಾಂಶುಪಾಲರಾದ ಶ್ರೀ. ರಮೇಶ್. ಕೆ. ಎನ್ ಸ್ವಾಗತಿಸಿ, ಅಧ್ಯಾಪಕರಾದ ಶ್ರೀ. ಲೋಕೇಶ್. ಕೆ ಧನ್ಯವಾದವಿತ್ತರು. ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಅಧ್ಯಾಪಕರಾದ ಹರೀಶ. ಜಿ ಕಾರ್ಯಕ್ರಮ ನಿರ್ವಹಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.