Breaking Posts

6/trending/recent
Type Here to Get Search Results !

8:10:45

43 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ವಿ.ಎಚ್.ಪಿ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ನಡೆಯುವ ಅಶ್ವಥ ಉಪನಯನ ಹಾಗೂ ಅಶ್ವಥ ವಿವಾಹ ಕಾರ್ಯಕ್ರಮ ಮತ್ತು ಸಾರ್ವಜನಿಕ ಅಶ್ವಥ ನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ.

43 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ವಿ.ಎಚ್.ಪಿ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ನಡೆಯುವ "ಅಶ್ವಥ ಉಪನಯನ ಹಾಗೂ ಅಶ್ವಥ ವಿವಾಹ ಕಾರ್ಯಕ್ರಮ ಮತ್ತು ಸಾರ್ವಜನಿಕ ಅಶ್ವಥ ನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ.
ಮಂಜೇಶ್ವರ: 43 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ಸೆಪ್ಟೆಂಬರ್ ತಿಂಗಳ 20 ಬುಧವಾರ ಹಾಗೂ 21 ಗುರುವಾರದಂದು ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಬಳಿ ಇರುವ ವಿ.ಎಚ್.ಪಿ ಕಾಸರಗೋಡು ಜಿಲ್ಲಾ ಸಮಿತಿಯ ಪ್ರೇರಣಾ ಕಚೇರಿಯ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಅಶ್ವಥ ಮರದ ಕಟ್ಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ "ಅಶ್ವಥ ಉಪನಯನ" ಹಾಗೂ "ಅಶ್ವಥ ವಿವಾಹ ಕಾರ್ಯಕ್ರಮ" ಮತ್ತು "ಸಾರ್ವಜನಿಕ ಅಶ್ವಥ ನಾರಾಯಣ ಪೂಜೆ" ಯು ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಬೆಳಗ್ಗೆ ಕನಿಲ ಶ್ರೀ ಭಗವತೀ ಕ್ಷೇತ್ರದ ಭಂಡಾರ ಮನೆಯಲ್ಲಿ ನಡೆಯಿತು. ಕನಿಲ ಶ್ರೀ ಭಗವತೀ ಕ್ಷೇತ್ರದ ಕಾರ್ನವರಾದ ಮಂಜಪ್ಪ ಕಾರ್ನವರ್ ರವರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ವೇಳೆ ಕನಿಲ ಶ್ರೀ ಭಗವತೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕಡಪ್ಪರ, ವಿ.ಎಚ್.ಪಿ ಜಿಲ್ಲಾ ಉಪಾಧ್ಯಕ್ಷರಾದ ಉಳುವಾನ ಶಂಕರ ಭಟ್, ವಿ. ಎಚ್. ಪಿ ಉಪಾಧ್ಯಕ್ಷ: ಮುಖ್ಯೋಪಾಧ್ಯಾಯ ಬಾಲಕೃಷ್ಣ ಶೆಟ್ಟಿ, ಬಿಜೆಪಿ ರಾಜ್ಯ ಸಮಿತಿ ಸದಸ್ಯ ಹರಿಶ್ಚಂದ್ರ ಮಂಜೇಶ್ವರ, ವಿ.ಎಚ್.ಪಿ ಕಣ್ಣೂರು ವಿಭಾಗ ಸೇವಾ ಪ್ರಮುಖ್ ಸುರೇಶ್ ಶೆಟ್ಟಿ ಪರಂಕಿಲ, ವಿಭಾಗ ಮಾತೃಶಕ್ತಿ ಪ್ರಮುಖ ಶ್ರೀಮತಿ ಮೀರ ಆಳ್ವ, ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ನವೀನ್ ರಾಜ್ ಕೆ.ಜೆ, ವಿ.ಎಚ್.ಪಿ ಜಿಲ್ಲಾ ಕಾರ್ಯದರ್ಶಿ ಯಾದವ ಕೀರ್ತೇಶ್ವರ, ಮಂಜೇಶ್ವರ ಖಂಡ ಮಾತೃಶಕ್ತಿ ಪ್ರಮುಖ್ ಶ್ರೀಮತಿ ಚಂಚಲಾಕ್ಷಿ ಕಡಪ್ಪರ, ಭಜರಂಗದಳ ಜಿಲ್ಲಾ ಸಹ ಸಂಯೋಜಕ ಪ್ರದೀಪ್ ಪೆರಿಯಾರ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ..👇🏻
ಈ ಮೇಲಿನ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಅಶ್ವಥ ದೇವರ ಮತ್ತು ಶ್ರೀ ಮಹಾಗಣಪತಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.