Breaking Posts

6/trending/recent
Type Here to Get Search Results !

8:10:45

ಬ್ರಹ್ಮ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಸಾಧನೆಗೈದ ಸಮಾಜದ ಸಾಧಕರಿಗೆ ಗೌರವಾರ್ಪಣೆ. ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬ್ರಹ್ಮ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಸಾಧನೆಗೈದ ಸಮಾಜದ ಸಾಧಕರಿಗೆ ಗೌರವಾರ್ಪಣೆ. ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.
ಮಂಜೇಶ್ವರ: ಬ್ರಹ್ಮ ಶ್ರೀ ನಾರಾಯಣಗುರು ಯುವ ವೇದಿಕೆ (ರಿ.) ಕಾಸರಗೋಡು ಇದರ 15 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ, ಸಮಾಜದಲ್ಲಿ ಸಾಧನೆಗೈದ ಸಾಧಕರಾದ ಕೆ.ಟಿ. ಸುವರ್ಣ ಉಳ್ಳಾಲ ಇವರಿಗೆ "ಗುರು ಶ್ರೀ" ಕಾಸರಗೋಡು ಜಿಲ್ಲಾ ಪ್ರಶಸ್ತಿ ಪ್ರಧಾನ ಹಾಗೂ + 2 ಅಥವಾ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ "ಗುರು ಶ್ರೀ" ಚಿನ್ನದ ಪದಕ ಹಾಗೂ ಬೆಳ್ಳಿ ಪದಕ ವಿತರಣೆ. ಮತ್ತು ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ "ವಿಶೇಷ ಗೌರವಾರ್ಪಣೆ" ಹಾಗೂ ಎಸ್. ಎಸ್. ಎಲ್. ಸಿ ಯಲ್ಲಿ ಪ್ರತಿ ಪಂಚಾಯತಿನ ಮೂರು ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಸೆಪ್ಟೆಂಬರ್ ತಿಂಗಳ 3 ರಂದು ಆದಿತ್ಯವಾರ ತಲಪಾಡಿ ಮರಿಯಾಶ್ರಮ ಚರ್ಚ್ ಹಾಲ್ ನಲ್ಲಿ ಮಧ್ಯಾಹ್ನ 2:30ಕ್ಕೆ ನಡೆಯಲಿದ್ದು,
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಿವೃತ್ತ ಪೊಲೀಸ್ ಅಧಿಕಾರಿಯಾದ ಸೀನ ಪೂಜಾರಿಯವರು ಹೊಸಂಗಡಿ ಗೇಟ್ ವೇ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಶ್ರೀ ನಾರಾಯಣ ಗುರು ಯುವ ವೇದಿಕೆಯು ಕಳೆದ 14 ವರ್ಷಗಳಿಂದೀಚೆಗೆ ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಮಾಜದ ಒಳಿತಿಗಾಗಿ ಉತ್ತಮವಾದ ಸೇವೆಯನ್ನು ಮಾಡುತ್ತಾ ಬಂದಿರುತ್ತದೆ. ಸಮಾಜದಲ್ಲಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕೊಸ್ಕರ ವಿದ್ಯಾರ್ಥಿ ವೇತನ, ಸಮಾಜದಲ್ಲಿ ಸಾಧನೆಗೈದ ಸಾಧಕರಿಗೆ ವಿಶೇಷವಾಗಿ ಗೌರವಿಸುತ್ತಾ ಬಂದಿರುತ್ತಾರೆ, ಈ ನಿಟ್ಟಿನಲ್ಲಿ ವೇದಿಕೆಯ ಕೆಲಸ ಪ್ರಶಂಶನೀಯ, ವೇದಿಕೆಯ ಕಾರ್ಯಕ್ರಮವು ಶ್ರೀದೇವರ ದೈವಗಳ ಹಾಗೂ ಗುರುಗಳ ಕೃಪಾಶೀರ್ವಾದದಿಂದ ಸಾಂಗವಾಗಿ ನಡೆಯಲಿ ಸಮಾಜ ಬಂಧುಗಳು ಒಗ್ಗಟ್ಟಾಗಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರಿ ಎಂದು ಶುಭ ಹಾರೈಸಿದರು. ವೇದಿಕೆಯ ಜಿಲ್ಲಾಧ್ಯಕ್ಷರಾದ ಕೃಷ್ಣ ಶಿವ ಕೃಪಾರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ವೇದಿಕೆಯ ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಬಡಾಜೆ, ಕೋಶಾಧಿಕಾರಿ ರವೀಂದ್ರ ಪೂಜಾರಿ ಭಂಡಾರ ಮನೆ ಕಡಂಬಾರು, ಪ್ರಧಾನ ಕಾರ್ಯದರ್ಶಿ ಹರೀಶ್ ಸುವರ್ಣ ಹೊಸಬೆಟ್ಟು ವೇದಿಕೆಯ ಪ್ರಧಾನ ಸಂಚಾಲಕ ರವಿ ಮುಡಿಮಾರು, ವೇದಿಕೆಯ ಸದಸ್ಯರಾದ ರಘುನಾಥ ವರ್ಕಾಡಿ, ರಮೇಶ್ ಸಂತಡ್ಕ ,ಶಾಂತರಾಮ ಪೊಸೋಟು, ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.