Breaking Posts

6/trending/recent
Type Here to Get Search Results !

8:10:45

ತುಳುನಾಡಿನ ಸಂಸ್ಕೃತಿ, ಆಚಾರ - ವಿಚಾರ, ನಡೆ - ನುಡಿ, ಜೀವನ ಪದ್ಧತಿ ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರೆಸಿಕೊಂಡು ಕುತೂಹಲ ಹುಟ್ಟಿಸುವ ಕಥೆ "ಕೊರಮ್ಮ" ನಾಳೆ ರಾಜ್ಯಾದ್ಯಂತ ಬಿಡುಗಡೆ.

ತುಳುನಾಡಿನ ಸಂಸ್ಕೃತಿ, ಆಚಾರ - ವಿಚಾರ, ನಡೆ - ನುಡಿ, ಜೀವನ ಪದ್ಧತಿ ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರೆಸಿಕೊಂಡು ಕುತೂಹಲ ಹುಟ್ಟಿಸುವ ಕಥೆ "ಕೊರಮ್ಮ" ನಾಳೆ ರಾಜ್ಯಾದ್ಯಂತ ಬಿಡುಗಡೆ.
ಮಂಗಳೂರು: ತುಳುನಾಡ ಸಂಸ್ಕೃತಿ, ಆಚಾರ- ವಿಚಾರ, ನಡೆ-ನುಡಿ, ಜೀವನ ಪದ್ಧತಿ, ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರಸಿಕೊಂಡು ಕುತೂಹಲ ಹುಟ್ಟಿಸುವ ಕಥೆ ಹೆಣೆದು ಸುಂದರವಾಗಿ ಮೂಡಿಬಂದಿರುವ ತುಳು ಸಿನೆಮಾ “ಕೊರಮ್ಮ", ಇಂದಿನ ಯುವ ಜನತೆಯನ್ನು ಬೆರಗುಗೊಳಿಸುವಂತೆ ಮಾಡುವ ಈ ಚಲನಚಿತ್ರ ಇದೇ ಆಗಸ್ಟ್ II ರ ಶುಕ್ರವಾರದಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಶಿವಧ್ವಜ್ ಶೆಟ್ಟಿ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದರು.
ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ, ಮುಂತಾದ ಕಡೆಗಳಲ್ಲಿ ಬಿಡುಗಡೆಯಾಗಲಿದೆ ಎಂದರು. ಸ
ಫೈರ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ಅಡ್ಯಾರ್ ಮಾಧವ ನಾಯ್ಕ್ ಅರ್ಪಿಸಿರುವ ಈ ಚಿತ್ರದ ಹಾಡಿನ ದೃಶ್ಯದಲ್ಲಿ ತುಳುನಾಡಿನ ಪೂರ್ವಜರ ಬದುಕು ಮಾರ್ಮಿಕವಾಗಿ ಪ್ರತಿಬಿಂಬಿತವಾಗಿದೆ. ತುಳುವರ ಹಿರಿಯರ ಕಾಲದ ಪರಿಕರಗಳನ್ನು ಸಮರ್ಥವಾಗಿ ಬಳಸಿಕೊಂಡು ಮಾಡಿರುವ ಈ ಸಿನೆಮಾದ ಕಥೆ-ಚಿತ್ರಕಥೆ-ನಿರ್ದೇಶನ ರಾಷ್ಟ್ರ ಪ್ರಶಸ್ತಿ ಚಿತ್ರ ನಿರ್ದೇಶಕ ಶಿವಧ್ವಜ್ ಶೆಟ್ಟಿಯವರು ಮಾಡಿರುವರು. ನಿರ್ಮಾಪಕರು ಅಡ್ಯಾರ್ ಮಾಧವ ನಾಯ್ಕ್, ಈಶ್ಚರಿದಾಸ್ ಶೆಟ್ಟಿ ಮತ್ತು ರಾಜೇಶ್ವರ ರೈ, ಸಂಗೀತ ಶಿನೋಯ್ ಎ. ಜೋಸೆಫ್, ಛಾಯಾಗ್ರಹಣ ಸುರೇಶ್‌ ಬೈರಸಂದ್ರ, ಸಂಕಲನ ಗಣೇಶ್ ನೀರ್ಚಾಲ್, ಸಂಭಾಷಣೆ ಶ್ರೀನಿಧಿ ಭಟ್, ಅನುವಾದ ಮತ್ತು ಸಾಹಿತ್ಯ ಕೆ. ಮಹೇಂದ್ರನಾಥ್ ಸಾಲೆತ್ತೂರು, ಕಲೆ ಸಂತೋಷ ಪೂಜಾರಿ ವೇಣೂರು, ಸಹ ನಿರ್ದೇಶನ ಹರ್ಷೀವ ಭಗೀರ, ಪ್ರಸಾಧನ ಕುಮಾರ್ ನೋಣವಿನಕೆರೆ, ನಿರ್ಮಾಣ-ನಿರ್ವಹಣೆ ವೀರೇಶ್‌ ಎಸ್. ಪಿ. ಹಂಚಿಕೆದಾರರು ದೀಪಕ್ ಸಿನಿ ಗ್ಯಾಲಕ್ಸಿ,. ಕಾರ್ಕಳದ ಬೈಲೂರಿನ ಸುಂದರ ತಾಣದಲ್ಲಿ ಒಂದೇ ಹಂತದಲ್ಲಿ ಚಿತ್ರೀಕಣವಾಗಿರುವ ಈ "ಕೊರಮ್ಮ" ತುಳುಚಿತ್ರದ ತಾರಾಗಣದಲ್ಲಿ - ಗುರುಹೆಗ್ಡೆ, ರೂಪ ಶ್ರೀ ವರ್ಕಾಡಿ, ಮೋಹನ್‌ ಶೇಣಿ, ಬಿಂದುರಕ್ಷಿದಿ, ಜಿನಪ್ರಸಾದ್‌, ದಿವ್ಯಶ್ರೀ, ನಾಯಕ್, ಲಕ್ಷ್ಮಣ್ ಕುಮಾರ್ ಮಲ್ಲೂರು, ನಮಿತಾ ಕೂಳೂರು, ಸುಮನ ಮಂಗಳೂರು, ಹರೀಶ್‌ ಜೋಡು ರಸ್ತೆ, ಮತ್ತಿರರು ನಟಿಸಿರುತ್ತಾರೆ. ತುಳು ಚಿತ್ರರಂಗಕ್ಕೆ ಬದಲಾವಣೆ ಕೊಡಬಲ್ಲ ಮೌಲ್ಯಯುತವಾದ ಕಥಾವಸ್ತುವನ್ನು "ಕೊರಮ್ಮ ಚಲನಚಿತ್ರ ಹೊಂದಿದೆ. ಪತ್ರಿಕಾಗೋಷ್ಟಿಯಲ್ಲಿ – ಶಿವಧ್ವಜ್ ಶೆಟ್ಟಿ, ಈಶ್ವರಿದಾಸ್‌ ಶೆಟ್ಟಿ, ಅಡ್ಯಾರ್ ಮಾಧವ ನಾಯ್ಕ್, ದೀಪಕ್, ಗುರು ಹೆಗ್ಡೆ, ಮೋಹನ್‌ ಶೇಣಿ, ಬಿಂದು ರಕ್ಷಿದಿ, ರೂಪ ಶ್ರೀ ವರ್ಕಾಡಿ, ದೀಪಕ್, ತಮ್ಮ ಲಕ್ಷ್ಮಣ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.