ನಟ ವಿಜಯ ರಾಘವೇಂದ್ರ ರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ಥೈಲ್ಯಾಂಡ್ ನಲ್ಲಿ ನಿಧನ.
ಆಗಸ್ಟ್ 07, 2023
0
ನಟ ವಿಜಯ ರಾಘವೇಂದ್ರ ರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ಥೈಲ್ಯಾಂಡ್ ನಲ್ಲಿ ನಿಧನ.
ಮಂಗಳೂರು: ನಟ ವಿಜಯರಾಘವೇಂದ್ರ ರವರ ಧರ್ಮಪತ್ನಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಮ್ ಅವರ ಸಹೋದರಿ ಸ್ಪಂದನ ರಾಘವೇಂದ್ರ ಥೈಲಂಡ್ ದೇಶದಲ್ಲಿ ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ವಿಜಯ್ ರಾಘವೇಂದ್ರ-ಸ್ಪಂದನಾ ಥೈಲ್ಯಾಂಡ್ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಪುನೀತ್ ರಾಜ್ಕುಮಾರ್ ಸೇರಿ ಅನೇಕ ಸೆಲೆಬ್ರಿಟಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈಗ ಸ್ಪಂದನಾ ಕೂಡ ನಿಧನ ಹೊಂದಿದ್ದು ನಿಜಕ್ಕೂ ಶಾಕಿಂಗ್ ಆಗಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.

