Breaking Posts

6/trending/recent
Type Here to Get Search Results !

8:10:45

ಅರಿಬೈಲು ಶ್ರೀ ನಾಗಬ್ರಹ್ಮ ಯುವಕ ಮಂಡಲದ ಸಮುದಾಯ ಭವನ ನಿರ್ಮಾಣಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ 2 ಲಕ್ಷ ರೂಪಾಯಿ ದೇಣಿಗೆ.

ಅರಿಬೈಲು ಶ್ರೀ ನಾಗಬ್ರಹ್ಮ ಯುವಕ ಮಂಡಲದ ಸಮುದಾಯ ಭವನ ನಿರ್ಮಾಣಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ 2 ಲಕ್ಷ ರೂಪಾಯಿ ದೇಣಿಗೆ.
ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಂಜೇಶ್ವರ ಯೋಜನಾ ವ್ಯಾಪ್ತಿಯ ಸುಂಕದಕಟ್ಟೆ ವಲಯದ ಶ್ರೀ ನಾಗಬ್ರಹ್ಮ ಯುವಕ ಮಂಡಲ ಅರಿಬೈಲು ಕಡಂಬಾರು ಇದರ ಸಮುದಾಯ ಭವನ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ರಾಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಪ್ರಸಾದ ರೂಪವಾಗಿ ಮಂಜೂರು ಮಾಡಿದ 2 ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಇಂದು ಯುವಕ ಮಂಡಲದ ಸಮಿತಿಯವರಿಗೆ ಮಂಜೇಶ್ವರ ತಾಲೂಕಿನ ಯೋಜನಾಧಿಕಾರಿಯವರಾದ ಶಶಿಕಲ ಸುವರ್ಣ ಹಸ್ತಾಂತರಿಸಿದರು.
ಈ ವೇಳೆ ಜಿಲ್ಲಾ ಜನಜಾಗೃತಿ ವೇದಿಕೆ ಕಾಸರಗೋಡು ಇದರ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಅರಿಬೈಲು, ಜಿಲ್ಲಾ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷರಾದ ಅಶ್ವತ್ ಪೂಜಾರಿ ಲಾಲ್ಬಾಗ್, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ ಕಡಂಬಾರು, ವರ್ಕಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜ್ ಕುಮಾರ್ ಸುಂಕದಕಟ್ಟೆ, ಒಕ್ಕೂಟದ ಅಧ್ಯಕ್ಷರಾದ ದಿನೇಶ್ ಕಾರ್ಯದರ್ಶಿ ಸುಧಾಕರ್ ತಲಪಾಡಿ, ವಲಯದ ಮೇಲ್ವಿಚಾರಕ ಭಾಸ್ಕರ್ ಸುಂಕದಕಟ್ಟೆ, ವಲಯದ ಮೇಲ್ವಿಚಾರಕ ಕೃಷ್ಣಪ್ಪ, ಸೇವಾ ಪ್ರತಿನಿಧಿ ಅಶ್ವಿನಿ, ಒಕ್ಕೂಟದ ಪದಾಧಿಕಾರಿಗಳು, ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.