Breaking Posts

6/trending/recent
Type Here to Get Search Results !

8:10:45

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವರ್ಕಾಡಿ ವಿಭಾಗ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ವತಿಯಿಂದ ಕಾವಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವರ್ಕಾಡಿ ವಿಭಾಗ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ವತಿಯಿಂದ ಕಾವಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.
ವರ್ಕಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಮಂಜೇಶ್ವರ ಇದರ ಮಾರ್ಗದರ್ಶನದಲ್ಲಿ ಸುಂಕದಕಟ್ಟೆ ವಲಯದ ವರ್ಕಾಡಿ ವಿಭಾಗದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ವರ್ಕಾಡಿ ಶ್ರೀ ಕಾವಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀ ಕಾವಿ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ವಾಸುದೇವ ಮಯ್ಯರವರು ನಡೆಸಿಕೊಟ್ಟರು.
ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶ್ರೀ ಕಾವಿ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ವಾಸುದೇವ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಧಾರ್ಮಿಕ ಉಪನ್ಯಾಸಕರಾಗಿ ಆಗಮಿಸಿದ ಎಂ. ಲಕ್ಷ್ಮೀನಾರಾಯಣ ಹೊಳ್ಳ ಮರಿಕಾಪು ಬೀಡುರವರು ಸನಾತನ ಧರ್ಮವೆಂಬುದು ಜಗತ್ತಿನಲ್ಲಿ ಒಂದೇ ಆದರೂ ಪ್ರದೇಶದಿಂದ ಪ್ರದೇಶಕ್ಕೆ ಜೀವನ ಶೈಲಿ ಬೇರೆ ಬೇರೆ ಆಗಿರಬಹುದು ಆದರೆ ಬದುಕಿನ ವ್ಯವಸ್ಥೆಯೊಳಗೆ ಒಗ್ಗಟ್ಟಾಗಿ ಸಂಸ್ಕೃತಿ ಸಂಸ್ಕಾರಯತವಾಗಿ ಬದುಕುವುದೇ ಧರ್ಮ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಮಂಜೇಶ್ವರ ತಾಲೂಕಿನ ಯೋಜನಾಧಿಕಾರಿಯವರಾದ ಶಶಿಕಲಾ ಸುವರ್ಣರವರು ನಾವು ಯಾವುದೇ ಕೆಲಸದಲ್ಲಿ ತೊಡಗಿಕೊಂಡಾಗ ಯೋಚಿಸಿ ಯೋಜನೆಯನ್ನು ಹಾಕಿಕೊಳ್ಳಬೇಕು ಯೋಜನೆಯಲ್ಲಿ ಇದ್ದುಕೊಂಡು ನಾವು ಇನ್ನಷ್ಟು ಅಭಿವೃದ್ಧಿ ಹೊಂದಿ ಸಮಗ್ರ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಬೇಕು. ದೇಹದ ಕೊಳೆ ಮಿಂದಾಗ ಹೋಗಬಹುದು ಮನಸ್ಸಿನ ಕೊಳೆ ಹೋಗಲು ಇಂತಹ ಸತ್ಕರ್ಮಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಶ್ರೀ ಕಾವಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತಸರರಾದ ಶ್ಯಾಮ್ ವಿಠಲ ಹೊಳ್ಳ ಕೋಡಿರವರು ಆಗಮಿಸಿ ಪೂಜ್ಯ ಖಾವಂದರು ವರ್ಕಾಡಿ ಕ್ಷೇತ್ರಕ್ಕೆ ಸಮಯೋಚಿತ ಸಹಕಾರವನ್ನು ಹಿಂದೆಯೂ ನೀಡಿದ್ದಾರೆ ಮುಂದೆಯೂ ಅವರ ಆಶೀರ್ವಾದದ ಬಲ ಇರಲಿ ಎಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಂಕದಕಟ್ಟೆ ವಲಯಾಧ್ಯಕ್ಷರಾದ ಸೋಮಶೇಖರ ಸುವರ್ಣ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರಗತಿ ಬಂದು ಸ್ವಸಹಾಯ ಸಂಘಗಳ ವರ್ಕಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಎಸ್ ಬೇರಿಂಜ ಅಧ್ಯಕ್ಷತೆ ವಹಿಸಿದರು.
ಕಾರ್ಯಕ್ರಮದಲ್ಲಿ ಕುಕ್ ಸ್ಟವ್ ವಿತರಣೆ ಮಾಡಲಾಯಿತು ನಂತರ
ಜಗದೀಶ್ ಮತ್ತು ಬಳಗ ಕೋಳ್ಯೂರುಪದವು ಇವರಿಂದ ಕುಣಿತ ಭಜನೆ ನಡೆಯಿತು. ಸುಂಕದಕಟ್ಟೆ ವಲಯದ ಮೇಲ್ವಿಚಾರಕರಾದ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿ, ವರ್ಕಾಡಿ ಒಕ್ಕೂಟದ ಸೇವಾ ಪ್ರತಿನಿಧಿ ಫ್ರಾನ್ಸಿಸ್ ಮೊಂತೆರೋ ಒಕ್ಕೂಟದ ಸಾಧನ ವರದಿ ವಾಚಿಸಿದರು. ಕಾರ್ಯಕ್ರಮವನ್ನು ರವೀಂದ್ರ ಕುಲಾಲ್ ವರ್ಕಾಡಿ ನಿರೂಪಿಸಿ, ಸಿತಾರಾಮ ಬೇರಿಂಜ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ವಲಯದ ಒಕ್ಕೂಟದ ಪದಾಧಿಕಾರಿಗಳು, ವರ್ಕಾಡಿ ಒಕ್ಕೂಟದ ಸ್ಥಾಪಕ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಊರಿನ ಗಣ್ಯರು, ದೇವಸ್ಥಾನದ ಆಡಳಿತ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಭಾಗವಹಿಸಿದ್ದರು. ನಂತರ ಸಾರ್ವಜನಿಕ ಅನ್ನದಾನ ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.