Breaking Posts

6/trending/recent
Type Here to Get Search Results !

8:10:45

ಕಾಸರಗೋಡು ಜಿಲ್ಲೆಯ ಕನ್ನಡ ಪರ ಹೋರಾಟದಲ್ಲಿ ಮಂಚೂಣಿಯಲ್ಲಿದ್ದ "ಕನ್ನಡ ಸಾಹಿತ್ಯ ಪರಿಷತ್" ನ ಕೇರಳ ಗಡಿನಾಡ ಘಟಕದ ಜಿಲ್ಲಾಧ್ಯಕ್ಷರಾಗಿರುವ S. V. ಭಟ್ ಹೃದಯಾಘಾತದಿಂದ ನಿಧನ.

ಕಾಸರಗೋಡು ಜಿಲ್ಲೆಯ ಕನ್ನಡ ಪರ ಹೋರಾಟದಲ್ಲಿ ಮಂಚೂಣಿಯಲ್ಲಿದ್ದ "ಕನ್ನಡ ಸಾಹಿತ್ಯ ಪರಿಷತ್" ನ ಕೇರಳ ಗಡಿನಾಡ ಘಟಕದ ಜಿಲ್ಲಾಧ್ಯಕ್ಷರಾಗಿರುವ S. V. ಭಟ್ ಹೃದಯಾಘಾತದಿಂದ ನಿಧನ.
ಕಾಸರಗೋಡು: ಕಾಸರಗೋಡು ಜಿಲ್ಲೆಯ ಕನ್ನಡ ಪರ ಹೋರಾಟದಲ್ಲಿ ಮಂಚೂಣಿಯಲ್ಲಿದ್ದ "ಕನ್ನಡ ಸಾಹಿತ್ಯ ಪರಿಷತ್" ನ ಕೇರಳ ಗಡಿನಾಡ ಘಟಕದ ಜಿಲ್ಲಾಧ್ಯಕ್ಷರಾಗಿರುವ S. V. ಭಟ್ ಯಾನೆ "ಸುಬ್ರಹ್ಮಣ್ಯ ವೆಂಕಟ್ರಮಣ ಭಟ್" ( 72) ಹೃದಯಾಘಾತದಿಂದ ಕುಸಿದು ಬಿದ್ದು, ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ನಿಧನರಾದರು. ಕಾಸರಗೋಡು ಬೀರಂತಬೈಲು ನಿವಾಸಿಯಾಗಿರುವ ಎಸ್. ವಿ ಭಟ್ ರವರು ಕುಂಬಳೆ, ಕಾಸರಗೋಡು, ಅಡೂರು ಹಾಗೂ ಜಿಲ್ಲೆಯ ವಿವಿಧ ಕಡೆಗಳ ಶಾಲೆಗಳಲ್ಲಿ ಅಧ್ಯಾಪಕರಾಗಿಯೂ, ಮುಖ್ಯೋಪಾಧ್ಯಾಯರಾಗಿಯೂ ಸೇವೆ ಸಲ್ಲಿಸಿ, ಕಾಸರಗೋಡು ಜಿಲ್ಲಾ ಅಸಿಸ್ಟೆಂಟ್ ಎಜುಕೇಶನ್ ಆಫೀಸರ್ ಆಗಿ ನಿವೃತ್ತಿ ಹೊಂದಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಘಟಕದ ಅಧ್ಯಕ್ಷರಾಗಿ ಮೂರು ಬಾರಿ ಆಯ್ಕೆಯಾಗಿ, ಕನ್ನಡ ಪರ ಹೋರಾಟಗಳಲ್ಲಿ, ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ನಿಟ್ಟಿನಲ್ಲಿ ಹಲವಾರು ಸಾಹಿತ್ಯ, ಸಮ್ಮೇಳನವನ್ನು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಯಶಸ್ವಿಯಾಗಿದ್ದರು. ಇದೀಗ ವಿಶ್ರಾಂತ ಜೀವನ ನಡೆಸುತ್ತಿದ್ದ ಎಸ್.ವಿ ಭಟ್ ರವರು ಇಂದು ಬದಿಯಡ್ಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದ ಇವರನ್ನು ಸ್ಥಳೀಯರು ಕೂಡಲೇ ಕಾಸರಗೋಡಿನ ಇ.ಕೆ ನಾಯ್ನರ್ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ನಿಧನರಾಗಿದ್ದಾರೆ. ಮೃತರು ಪತ್ನಿ ತಾರ ಪಿ. ಭಟ್ (ನಿವೃತ್ತ ಪೋಸ್ಟ್ ಮಾಸ್ಟರ್), ಮಕ್ಕಳಾದ: ಡಾ. ಮುರಳೀಧರ ಭಟ್ ( ಪುತ್ತೂರು ಹಾಗೂ ವಿಟ್ಲದಲ್ಲಿ ಕಾರ್ಯಾಚರಿಸುತ್ತಿರುವ ಪರ್ಫೆಕ್ಟ್ ಸ್ಮೈಲ್ ದಂತ ಚಿಕಿತ್ಸಾಲಯದ ವೈದ್ಯ), ವೀಣಾ (ಇಂಜಿನಿಯರ್ ಬೆಂಗಳೂರು), ಸೊಸೆ: ಡಾ. ಶಿಲ್ಪಾ (ಆಯುರ್ವೇದಿಕ್ ವೈದ್ಯೆ), ಅಳಿಯ: ಪ್ರಶಾಂತ್ (ಇಂಜಿನಿಯರ್ ಬೆಂಗಳೂರು), ಸಹೋದರಿ: ಗಿರಿಜಾ ಹಾಗೂ ಇನ್ನೋರ್ವೇ ಸಹೋದರಿಯನ್ನು ಕೂಡಾ ಅಗಲಿದ್ದಾರೆ. ಇದೀಗ ಮೃತದೇಹ ಇ.ಕೆ ನಯನರ್ ಆಸ್ಪತ್ರೆಯಲ್ಲಿದ್ದು, ಅಂತ್ಯಕ್ರಿಯೆ ನಾಳೆ ಬೆಳಗ್ಗೆ ನಡೆಯಲಿದೆ ಎಂದು ಮನೆ ಮಂದಿ ತಿಳಿಸಿದ್ದಾರೆ. ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಎಸ್ .ವಿ. ಭಟ್ ಅವರ ನಿಧನಕ್ಕೆ ಸಂತಾಪ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಹಿರಿದಾದುದು. ಅವರ ಅಗಲುವಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಮತ್ತು ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.