Breaking Posts

6/trending/recent
Type Here to Get Search Results !

8:10:45

ಕುಳೂರು ಸರಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರವೇಶೋತ್ಸವ.

ಕುಳೂರು ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರವೇಶೋತ್ಸವ :
ಮಂಜೇಶ್ವರ : ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಆರಂಭದ ದಿನವನ್ನು ಶಾಲಾ ಪ್ರವೇಶೋತ್ಸವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯದ ಮುಖ್ಯಮಂತ್ರಿ ಶ್ರೀ ಪಿನರಾಯಿ ವಿಜಯನ್ ರವರು ಉದ್ಘಾಟಿಸಿದ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವದ ಪ್ರಸಾರವನ್ನು ಮಾಡಲಾಯಿತು.
ಬಳಿಕ ಶಾಲಾ ಮಟ್ಟದ ಪ್ರವೇಶೋತ್ಸವವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರುರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮೀಂಜ ಗ್ರಾಮ ಪಂಚಾಯತಿನ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ ಕೆ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ನಾರಾಯಣ ನೈಕ್‌ ನಡುಹಿತ್ಲು, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ ಹಾಗೂ ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಚೈತ್ರ ಕಲ್ಕಾರ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ‌ ಪ್ರಾಸ್ತಾವಿಕವಾಗಿ ಮಾತನಾಡಿದರು.
‌ಇದೇ ಸಂದರ್ಭದಲ್ಲಿ ಶಾಲೆಯ ನವಾಗತ ಮಕ್ಕಳಿಗೆ ವಿವಿಧ ಕೊಡುಗೆಗಳ ವಿತರಣೆ ನಡೆಯಿತು. ಪ್ರೀ ಪ್ರೈಮರಿ ಮಕ್ಕಳ ಸಮವಸ್ತ್ರವನ್ನು ಕೊಡುಗೆ ನೀಡಿದ ಗುಬ್ಯ ಶ್ರೀ ಶ್ರೀಧರ ಶೆಟ್ಟಿ, ಪಾಠಪುಸ್ತಕವನ್ನು ಕೊಡುಗೆ ನೀಡಿದ ಶ್ರೀಮತಿ ವಿನಯ ಸೌಜನ್ ಹಾಗೂ ಪ್ರೀ ಪ್ರೈಮರಿ ಮತ್ತು ಒಂದನೇ ತರಗತಿ ಮಕ್ಕಳಿಗೆ ಬ್ಯಾಗ್ ಕೊಡುಗೆ ನೀಡಿದ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರಿಗೆ ಶಾಲಾ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ನಡೆದ ರಕ್ಷಕರ ತರಬೇತಿಯನ್ನು ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ನಡೆಸಿಕೊಟ್ಟರು.
ಶಾಲಾ ಶಿಕ್ಷಕಿಯರಾದ ಶ್ರೀಮತಿ ಶ್ವೇತ ಇ, ಆಯಿಶತ್ ಸೆಯಿದ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಶ್ರೀ ಸುಧಾಕರ್ ಶೆಟ್ಟಿ ಎಲಿಯಾಣ, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶ್ರೀ ಹರಿರಾಮ ಕುಳೂರು, ಶ್ರೀ ಚಂದ್ರಹಾಸ ಪೂಜಾರಿ ಕುಳೂರು, ಶ್ರೀ ವಸಂತ ಪೂಜಾರಿ ಕುಳೂರು ಹಾಗೂ ರಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು. ಬಳಿಕ ಸಿಹಿತಿಂಡಿ ಹಾಗೂ ಮಧ್ಯಾಹ್ನದೂಟ ವಿತರಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.