Breaking Posts

6/trending/recent
Type Here to Get Search Results !

8:10:45

ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭ.

ಕುಳೂರು ಶಾಲೆಯಲ್ಲಿ ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭ.
ಮಂಜೇಶ್ವರ : ಕೇರಳದಲ್ಲಿ ಗ್ರಂಥಾಲಯಕ್ಕೆ ನಾಂದಿ ಹಾಡಿದ ಪಿ.ಎನ್. ಪಣಿಕ್ಕರ್ ರವರ ಚರಮ ದಿನಾಚರಣೆಯ ಭಾಗವಾಗಿ ಆಚರಿಸಿದ ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಆ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಕ್ಷಕಿ ಹಾಗೂ ಲೇಖಕಿಯೂ ಆಗಿರುವ ಲಕ್ಷ್ಮೀ ವಿ ಭಟ್ ರವರು ಮಕ್ಕಳಿಗೆ ಶಿಶು ಗೀತೆಗಳನ್ನು ಹಾಡಿ ಮನರಂಜಿಸಿದರು. ಜೊತೆಗೆ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಗಮನ ಸೆಳೆದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೇಲುರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಜತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ವಾರಾಚರಣೆಯ ಭಾಗವಾಗಿ ರಚನೆಯಾದ ಹಸ್ತಪತ್ರಿಕೆಯನ್ನು ಲಕ್ಷ್ಮೀ ವಿ ಭಟ್ ರವರು ಬಿಡುಗಡೆಗೊಳಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಶಾಲಾ ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಅಶ್ವಿನಿ ಎಂ, ಶ್ವೇತ ಇ, ಆಯಿಶತ್ ಸೆಯಿದ ಸಹಕರಿಸಿದರು‌.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.