Breaking Posts

6/trending/recent
Type Here to Get Search Results !

8:10:45

ಭಾರಿ ಮಳೆ ಹಿನ್ನಲೆಯಲ್ಲಿ ಮಧೂರು ಮಧುವಾಹಿನಿ ಹೊಳೆ ತುಂಬಿ ಸಿದ್ಧಿವಿನಾಯಕ ಕ್ಷೇತ್ರ ಪರಿಸರ ಜಲಾವೃತ. ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ. ಇನ್ನೂ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ, ನೀರಿಗಿಳಿಯದಂತೆ ಭಕ್ತರಿಗೆ ಸೂಚನೆ.

ಭಾರಿ ಮಳೆ ಹಿನ್ನಲೆಯಲ್ಲಿ ಮಧೂರು ಮಧುವಾಹಿನಿ ಹೊಳೆ ತುಂಬಿ ಸಿದ್ಧಿವಿನಾಯಕ ಕ್ಷೇತ್ರ ಪರಿಸರ ಜಲಾವೃತ. ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ. ಇನ್ನೂ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ, ನೀರಿಗಿಳಿಯದಂತೆ ಭಕ್ತರಿಗೆ ಸೂಚನೆ.
ಕಾಸರಗೋಡು: ಭಾರಿ ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ಮಧು ವಾಹಿನಿ ಹೊಳೆಯು ತುಂಬಿ, ಕ್ಷೇತ್ರ ಪರಿಸರ ಜಲಾವೃತವಾಗಿದೆ.
ಕ್ಷೇತ್ರ ಜೀರ್ಣೋದ್ಧಾರದ ಹಿನ್ನಲೆಯಲ್ಲಿ ಇಂದು ಬೆಳಗ್ಗೆನೆ ಮಧ್ಯಾಹ್ನದ ಪೂಜೆ ನಡೆಯಿತು.
ಇದೀಗ ಕ್ಷೇತ್ರ ಪರಿಸರ ಜಲಾವೃತವಾಗಿದ್ದು, ವೀಕ್ಷಣೆಗಾಗಿ ಭಕ್ತರು ಆಗಮಿಸುತ್ತಿದ್ದಾರೆ.
ಕೊಡಗು: ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗುತ್ತಿದ್ದು, ಇನ್ನೂ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ ಎಂದು ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಹಲವು ನದಿ ಮತ್ತು ಇತರ ಜಲಾಶಯಗಳು ತುಂಬಿ ಹರಿಯುತ್ತಿವೆ. ಮಡಿಕೇರಿ, ಭಾಗಮಂಡಲ ನಾಪೋಕ್ಲು ಸೇರಿದಂತೆ ಹಲವೆಡೆ ವರುಣಾರ್ಭಟ ಜೋರಾಗಿದೆ. ತಲಕಾವೇರಿಯ ಬ್ರಹ್ಮಗಿರಿ ತಪ್ಪಲಿನಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರ ಭಾಗಮಂಡಲದ‌ ತ್ರಿವೇಣಿ ಸಂಗಮ ಭರ್ತಿಯಾಗಿದೆ. ತ್ರಿವೇಣಿ ಸಂಗಮವು ಕಾವೇರಿ, ಕನ್ನಿಕೆ ಹಾಗೂ ಸುಜೋತಿ ನದಿಗಳು ಸೇರುವ ಸ್ಥಳವಾಗಿದೆ. ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಹೀಗಿ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೂ ರಜೆ ಘೋಷಿಸಲಾಗಿದೆ.
ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಭರ್ತಿಯಾಗುವ ಹಂತದಲ್ಲಿದ್ದು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ಕ್ಷೇತ್ರದ ನದಿಗಳ ಸಂಗಮಕ್ಕೆ ಜನರು ಎದುರು ನೋಡುತ್ತಿದ್ದಾರೆ.
ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗುತಿದ್ದು, ನೀರಿಗಿಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗುತ್ತಿದೆ. ಸುಬ್ರಹ್ಮಣ್ಯದ ಸುತ್ತಮುತ್ತ ಘಟ್ಟ ಪ್ರದೇಶದಲ್ಲಿ ನಿನ್ನೆ (ಜೂ.26 ಬುಧವಾರ) ತಡರಾತ್ರಿಯಿಂದ ಭಾರಿ ಮಳೆ ಸುರಿದುದರಿಂದ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯಾಗಿದೆ. ನಿರಂತರ ಮಳೆಯಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಇದೀಗ ಭಕ್ತರು ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಆದರೂ ಕೆಲವು ಭಕ್ತರು ನೀರಿಗಳಿದು ಸ್ನಾನ ಮಾಡಿದ್ದಾರೆ. ಈ ವೇಳೆ ದೇವಳದ ಭದ್ರತಾ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿ ಅವರನ್ನು ಬೈದು ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.