Breaking Posts

6/trending/recent
Type Here to Get Search Results !

8:10:45

ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರಂಗ ಮತ್ತು ಬಾಲಸಭೆ ಉದ್ಘಾಟನೆ.

ಕುಳೂರು ಶಾಲೆಯಲ್ಲಿ ವಿದ್ಯಾರಂಗ ಮತ್ತು ಬಾಲಸಭೆ ಉದ್ಘಾಟನೆ.
ಮಂಜೇಶ್ವರ : ಶಾಲಾ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಯಾದ ವಿದ್ಯಾರಂಗ ಮತ್ತು ಬಾಲಸಭೆಯ ಉದ್ಘಾಟನಾ ಕಾರ್ಯಕ್ರಮವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಎಲಿಯಾಣರವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಹಾಗೂ ಲೇಖಕಿ ಆಗಿರುವ ಲಕ್ಷ್ಮೀ ವಿ ಭಟ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೇಲುರವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.