Breaking Posts

6/trending/recent
Type Here to Get Search Results !

8:10:45

ಮಂಜೇಶ್ವರ ಪೊಲೀಸ್ ಠಾಣೆಯ ಎ.ಎಸ್.ಐ. ಕುಟ್ಟಿಕೋಲು ನಿವಾಸಿ ಮಧು (50) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.

ಮಂಜೇಶ್ವರ ಪೊಲೀಸ್ ಠಾಣೆಯ ಎ.ಎಸ್.ಐ. ಕುಟ್ಟಿಕೋಲು ನಿವಾಸಿ ಮಧು (50) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.
ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯ ಎ.ಎಸ್.ಐ.ಯಾಗಿ ಸೇವೆ ಸಲ್ಲಿಸುತ್ತಿರುವ ಕುಟ್ಟಿಕೋಲು ನಿವಾಸಿ ಮಧು (50) ಎಂಬವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ಪೊಲೀಸ್ ಕ್ವಾಟರ್ಸಿನೊಳಗೆ ಪತ್ತೆಯಾಗಿದೆ. ಮಾಹಿತಿ ತಿಳಿದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮಧು ಅವರು ಅವಿವಾಹಿತರಾಗಿದ್ದಾರೆ. ಈ ಹಿಂದೆ ಬದಿಯಡ್ಕ, ಆದೂರು, ಕಾಸರಗೋಡು ನಗರ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಇವರು ಪೊಲೀಸ್‌ ಠಾಣೆಗೆ ಬರುವ ಜನರ ಜತೆ ಉತ್ತಮ ರೀತಿಯಲ್ಲಿ ವ್ಯವಹರಿಸುತ್ತಿದ್ದರು. ಮಧು ಅವರು ಆತ್ಮಹತ್ಯೆ ಮಾಡಲು ಕಾರಣವೇನೆಂದು ತಿಳಿದು ಬಂದಿಲ್ಲ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.