ಸೂರಂಬೈಲು: ಸೂರಂಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ವವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸುನೀತ ಎ ಧ್ವಜಾರೋಹಣ ನಡೆಸಿ ಸಂದೇಶ ನೀಡಿದರು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಸೋಮಶೇಖರ ಜೆ ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮೊಯ್ದು ಸೀತಾಂಗೋಳಿ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯರಾದ ಮುಹಮ್ಮದ್ ಜುನೈದ್ ಎಂ ಕೆ, ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಪೆರ್ಣೆ ಮುಖ್ಯ ಅತಿಥಿಗಳಾಗಿದ್ದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ದಯಾನಂದ ಪೆರ್ಣೆ ಶುಭಾಶಂಸನೆಗೈದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುನೀತ ಎ ಸ್ವಾಗತಿಸಿ, ಸ್ಟಾಫ್ ಸೆಕ್ರೆಟರಿ ಕಿರಣ್ ಕೆ ವಂದಿಸಿದರು. ರಾಧಾಕೃಷ್ಣ ಬಂಬ್ರಾಣ, ಶಾಲಾ ನಾಯಕಿ ಶ್ರದ್ಧಾ ಎ ಯಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಸದಸ್ಯರನ್ನು ಶಾಲು ಹೊದೆಸಿ ಅಭಿನಂದಿಸಲಾಯಿತು.
8:10:45