ಬೀರಂತಬೈಲು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ವತಿಯಿಂದ 2025–26ನೇ ಸಾಲಿನಲ್ಲಿ ನಿವೃತ್ತಿ ಹೊಂದುತ್ತಿರುವ ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕ-ಶಿಕ್ಷಕಿಯರಿಗೆ ವಿದಾಯ ಕೂಟ ಸಮಾರಂಭ ಕನ್ನಡ ಅಧ್ಯಾಪಕ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕಿ ಯು ಮಹೇಶ್ವರಿ ಉದ್ಘಾಟಿಸಿ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಲು ಹಿರಿಯರು ಮಾಡಿದ ಶ್ರಮವನ್ನು ಸ್ಮರಿಸಿದರು. ಅವರ ಸಾಧನೆಗಳನ್ನು ಮುಂದುವರಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುತ್ತಿರುವ ಶಿಕ್ಷಕ-ಶಿಕ್ಷಕಿಯರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸುಕೇಶ್ ಎ ವಹಿಸಿದ್ದರು. ಹಿರಿಯ ಕನ್ನಡ ಸಾಹಿತಿ ಹಾಗೂ ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕ ಮುಖ್ಯ ಅತಿಥಿಗಳಾಗಿದ್ದರು. ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಸವಿತಾ ಪುಂಡೂರು, ಡಿ.ಪಿ.ಒ ಆಗಸ್ಟಿನ್ ಬರ್ನಾಡ್ ಮೊಂತೆರೊ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಯಂ, ನಿವೃತ್ತ ವಿದ್ಯಾಧಿಕಾರಿ ಪುಂಡರೀಕಾಕ್ಷ ಆಚಾರ್ಯ ಹಾಗೂ ಉಪಾಧ್ಯಕ್ಷೆ ಪ್ರಭಾವತಿ ಕೆದಿಲಾಯ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿಯ ಅಧಿಕೃತ ವಕ್ತಾರರಾದ ಬಾಬು ಕೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋಶಾಧಿಕಾರಿ ಶರತ್ ಕುಮಾರ್ ಯಂ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಜಬ್ಬಾರ್, ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಹಾಗೂ ಉಪಾಧ್ಯಕ್ಷೆ ಶ್ರೀಲತಾ ನಿರೂಪಿಸಿದರು.