ಮಂಗಳೂರು: ಇತ್ತೀಚೆಗೆ ನಿಧನರಾದ ಬಂಟರ ಯಾನೆ ನಾಡವರ ಮಾತೃಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಎಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಭೆ ಏಪ್ರಿಲ್ 4ರಂದು ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ.
ನಗರದ ಬಂಟ್ಸ್ ಹಾಸ್ಟೇಲ್‌ನಲ್ಲಿ ಇರುವ ಶ್ರೀಮತಿ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಕಟಣೆ ತಿಳಿಸಿದೆ.