ಮಂಜೇಶ್ವರ : ವರ್ಕಾಡಿ ಜಿಲ್ಲಾ ಪಂಚಾಯತು ಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶೇಕಡಾ 100 ಫಲಿತಾಂಶ ಪಡೆದ ಶಾಲೆಗಳಿಗೆ ಗೌರವಾಭಿನಂದನೆ ಕಾರ್ಯಕ್ರಮವು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆ ಕೊಡ್ಲಮೊಗರಿನಲ್ಲಿ ಜರುಗಿತು. ಕಳೆದ ಎಸ್ ಎಸ್ ಎಲ್ ಸಿ ಹಾಗೂ ಪ್ಲಸ್ ಟು ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿಯೂ ಪಡೆದ 20ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ವಿತರಿಸುವ ಮೂಲಕ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ ವರ್ಕಾಡಿ ಪ್ರಶಂಸೆಗೆ ಪಾತ್ರರಾದರು.
ಕಾಸರಗೋಡು ಸಂಸದರಾದ ಶ್ರೀ ರಾಜ ಮೋಹನ್ ಉಣ್ಣಿತ್ತಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಸಾಧನೆಯ ಮೂಲಕ ತಮ್ಮೊಳಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹಬೇಕು. ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿ ಕೊಂಡಾಗ ಯಶಸ್ಸು ಸಾಧ್ಯ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಮಂಜೇಶ್ವರ ಶಾಸಕರಾದ ಎ.ಕೆ. ಎಂ. ಅಶ್ರಫ್ ಎಲ್ಲಾ ವಿಷಯಗಳಲ್ಲಿ A + ಪಡೆದ ಹೈಸ್ಕೂಲು ಮತ್ತು ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಾಬು ಅಬ್ರಹಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಹರ್ಷಾದ್ ವರ್ಕಾಡಿ ಸ್ವಾಗತಿಸಿ, ವರ್ಕಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಬಿ. ಎ. ವಂದಿಸಿದರು. ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮರ್ ಬೋರ್ಕಳ, ಮಂಜೇಶ್ವರ ಗ್ರಾ.ಪಂ.ಅಧ್ಯಕ್ಷ ಬಶೀರ್ ಕನಿಲ, ವರ್ಕಾಡಿ, ಮೀಂಜ ಹಕಗೂ ಮಂಜೇಶ್ವರ ಗ್ರಾಮ ಪಂಚಾಯತಿನ ಸದಸ್ಯರುಗಳು ಹಾಗೂ ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಶ್ರೀ ವಿಜಯಕುಮಾರ್ ಮತ್ತು ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಬಿ. ಉಪಸ್ಥಿತರಿದ್ದರು. ಕಿಶೋರ್ ಕುಮಾರ್ ಮತ್ತು ವನಿತಾ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.