ಕುಂಬಳೆ: ಸರೋವರ ಕ್ಷೇತ್ರ ಶ್ರೀ ಅನಂತಪುರದಲ್ಲಿ 2027 ಫೆ. 23ರಿಂದ 28ರ ತನಕ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಹಾಗೂ ತೆಪ್ಪೋತ್ಸವ ಸಹಿತವಾದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನ. 29ರಂದು ನಾಳೆ ಲೋಕಾರ್ಪಣೆಯಾಗಲಿದೆ.
ಬೆಳಿಗ್ಗೆ 8.30ಕ್ಕೆ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಎಡನೀರು ಮಠಾಧೀಶ ಶ್ರೀ ಸಚ್ಛಿದಾನಂದ ಭಾರತಿ ಶ್ರೀ ಪಾದಂಗಳವರು ಶ್ರೀ ಪದ್ಮನಾಭ ಸ್ವಾಮಿಗೆ ಮೊದಲ ಆಮಂತ್ರಣ ಸಮರ್ಪಣೆ ನಡೆಸುವರು. ಬಳಿಕ 9.30ಕ್ಕೆ ದೇವಳದ ಹಳೆ ಸಭಾಂಗಣದಲ್ಲಿ ಮಲಬಾರ್ ದೇವಸ್ವಂ ಮಂಡಳಿ ಅಧ್ಯಕ್ಷರು ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ಆಮಂತ್ರಣ ಪತ್ರಿಕೆಯ ಲೋಕಾರ್ಪಣೆ ಸಮಾರಂಭ ನಡೆಯಲಿದೆ.